Select Location
All Locations
State
Region
City / District
ಪಶ್ಚಿಮ ಬಂಗಾಳ ಚುನಾವಣೆ: ಬಿಜೆಪಿ ಬಗ್ಗೆ ಬಿಎಸ್ ಯಡಿಯೂರಪ್ಪ ಅಚ್ಚರಿ ಹೇಳಿಕೆ! ಗೆಲ್ಲೋದ್ಯಾರು?

ಪಶ್ಚಿಮ ಬಂಗಾಳ ಚುನಾವಣೆ: ಬಿಜೆಪಿ ಬಗ್ಗೆ ಬಿಎಸ್ ಯಡಿಯೂರಪ್ಪ ಅಚ್ಚರಿ ಹೇಳಿಕೆ! ಗೆಲ್ಲೋದ್ಯಾರು?

ಶಿವಮೊಗ್ಗ (ಏ.26): ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಮತದಾನವಾಗಿದೆ. ಅಲ್ಲಿನ ಜನರು ಬಿಜೆಪಿ ಪರ ಉತ್ತಮ ನಿಲುವು ಹೊಂದಿದ್ದರು. ಹೀಗಾಗಿ ಅಲ್ಲಿ ಬಿಜೆಪಿಗೆ ಗೆಲ್ಲಲಿದೆ. ಇನ್ನು ಉಪಚುನಾವಣೆ ನಡೆದಿರುವ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರರನ್ನು ಭಯೋತ್ಪಾದಕ ಎಂದು ಕರೆಯ ಬಾರದಾಗಿತ್ತು.

ಕ್ಷಮೆ ಕೇಳಿ ಇದನ್ನು ಕೊನೆಗಾಣಿಸಬೇಕು. ಮೇ 4ರ ನಂತರ ಸಿಎಂ ಬದಲಾವಣೆ ವಿಷಯವೂ ಕಾಂಗ್ರೆಸ್ ಪಕ್ಷದ ಅಂತರಿಕ ವಿಚಾರವಾಗಿದ್ದು, ಕಾದು ನೋಡೋಣ ಎಂದು ಹೇಳಿದರು. ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ-ಟಿಎಂಸಿ ನೇರಾನೇರ ಸ್ಪರ್ಧೆ ದೇಶದಲ್ಲಿ ಅತಿ ಹೆಚ್ಚು ಕುತೂಹಲ ಕೆರಳಿಸಿರುವ ಪ.ಬಂಗಾಳ ವಿಧಾನಸಭೆ ಚುನಾವಣೆಗಳು 2 ಹಂತದಲ್ಲಿ ನಡೆಯಲಿವೆ. ಈಗಾಗಲೇ ಎಂದರೆ ಏ.23 ರಂದು ನಡೆದಿದ್ದು ಮುಂದಿನ ಹಂತ ಏ.29ಕ್ಕೆ ನಡೆಯಲಿವೆ. 294 ಕ್ಷೇತ್ರಗಳನ್ನು ರಾಜ್ಯ ಹೊಂದಿದೆ. ಈ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ.


Asianet News 1 hour ago
Home Flash News