Select Location
All Locations
State
Region
City / District
ಮೋದಿ ಮತ್ತು ಬಿಜೆಪಿ ಗೆಲುವಿಗೆ ಪಂಜಾಬಿಗರು ಬ್ರೇಕ್‌ ಹಾಕುತ್ತಾರೆ: ಕೇಜ್ರಿವಾಲ್

ಮೋದಿ ಮತ್ತು ಬಿಜೆಪಿ ಗೆಲುವಿಗೆ ಪಂಜಾಬಿಗರು ಬ್ರೇಕ್‌ ಹಾಕುತ್ತಾರೆ: ಕೇಜ್ರಿವಾಲ್

ಚಂಡೀಗಢ(ಪಂಜಾಬ್): ‘ಬಿಜೆಪಿಯು ಚುನಾವಣಾ ಪ್ರಕ್ರಿಯೆಗಳನ್ನು ದುರ್ಬಲಗೊಳಿಸುತ್ತಿದೆ’ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಆರೋಪಿಸಿದ್ದಾರೆ. ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವ ಸಂಸ್ಥೆಗಳು ಅಪಾಯದಲ್ಲಿದೆ ಎಂದು ದೂರಿದ್ದಾರೆ. ‘ಪಶ್ಚಿಮ ಬಂಗಾಳ, ಬಿಹಾರ, ಮಹಾರಾಷ್ಟ್ರ ಮತ್ತು ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಇತ್ತೀಚೆಗೆ ನಡೆದ ಚುನಾವಣೆಗಳು ಪ್ರಜಾಪ್ರಭುತ್ವದ ಅವನತಿಯ ಮಾದರಿಯನ್ನು ಪ್ರತಿಬಿಂಬಿಸುತ್ತಿವೆ. ವಿಶೇಷವಾಗಿ ಕಳೆದ ಕೆಲವು ತಿಂಗಳುಗಳಿಂದ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಚುನಾವಣಾ ಆಯೋಗದ ನಿಷ್ಪಕ್ಷಪಾತತೆಯನ್ನು ಪ್ರಶ್ನಿಸುವಂತೆ ಮಾಡಿವೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಮುಂದುವರಿದು, ‘ಹಲವು ರಾಜ್ಯಗಳ ಚುನಾವಣೆಗಳಲ್ಲಿ ಬಿಜೆಪಿ ಗೆದ್ದಿದೆ. ಆದರೆ, ಪಂಜಾಬ್‌ನಲ್ಲಿ ಅದು ಸಾಧ್ಯವಿಲ್ಲ. ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆ ಒಂದು ಮಹತ್ವದ ತಿರುವು ನೀಡಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Prajavani 1 hour ago
Home Flash News