ಬಿಜೆಪಿ ಬಂಗಾಳದ ನಾಗರಿಕತೆಯ ಯುದ್ಧ ಗೆದ್ದಿದ್ದು ಹೇಗೆ?
ಬಂಗಾಳ ಇಂದು ಯೋಚಿಸುವುದನ್ನು ಭಾರತ ನಾಳೆ ಯೋಚಿಸುತ್ತದೆ’ ಎನ್ನುವ ಕಾಲವೊಂದಿತ್ತು. ಸ್ವಾತಂತ್ರ್ಯಪೂರ್ವದ ಬಂಗಾಳದ ಸಾಂಸ್ಕೃತಿಕ, ಬೌದ್ಧಿಕ ಸಾಮರ್ಥ್ಯದ ಕನ್ನಡಿಯಂತಿದೆ ಈ ಮಾತು. ಇರದೇ ಏನು ಹೇಳಿ? ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರು, ಮಹರ್ಷಿ ಅರಬಿಂದೋ, ರವೀಂದ್ರನಾಥ್ ಟ್ಯಾಗೋರ್, ಸುಭಾಷ್ ಚಂದ್ರ ಬೋಸ್, ರಾಸ್ ಬಿಹಾರಿ ಬೋಸ್, ಪರಮಹಂಸ ಯೋಗಾನಂದ, ಜಗದೀಶ್ ಚಂದ್ರ ಬೋಸ್, ಶ್ಯಾಮಪ್ರಸಾದ ಮುಖರ್ಜಿ.. ಹೀಗೆ ಖ್ಯಾತನಾಮ ಬಂಗಾಳಿಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ.