Select Location
All Locations
State
Region
City / District
ಅಸಭ್ಯ ಸನ್ನೆಗೆ ಬೆಲೆ ತೆತ್ತ ಟಿಮ್ ಡೇವಿಡ್​.. ಪಂದ್ಯ ಗೆದ್ದ ಬೆನ್ನಲ್ಲೇ ಆರ್​​ಸಿಬಿಗೆ ಡಬಲ್ ಶಾಕ್

ಅಸಭ್ಯ ಸನ್ನೆಗೆ ಬೆಲೆ ತೆತ್ತ ಟಿಮ್ ಡೇವಿಡ್​.. ಪಂದ್ಯ ಗೆದ್ದ ಬೆನ್ನಲ್ಲೇ ಆರ್​​ಸಿಬಿಗೆ ಡಬಲ್ ಶಾಕ್

ಬೆಂಗಳೂರು: ಐಪಿಎಲ್ 2026ರಲ್ಲಿ RCB ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆದ ಹೈ-ವೋಲ್ಟೇಜ್ ಪಂದ್ಯದ ಬೆನ್ನಲ್ಲೇ ಹೊಸ ವಿವಾದವೊಂದು ಸ್ಫೋಟಗೊಂಡಿದೆ. ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಆರ್‌ಸಿಬಿ ತಂಡದ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್ ಅವರಿಗೆ ಭಾರೀ ದಂಡ ವಿಧಿಸಲಾಗಿದೆ.

ಮುಂಬೈ ಇಂಡಿಯನ್ಸ್ ವಿರುದ್ಧದ ರೋಚಕ ಪಂದ್ಯದ ವೇಳೆ ಡಗೌಟ್‌ನಲ್ಲಿ ಕುಳಿತಿದ್ದ ಟಿಮ್ ಡೇವಿಡ್, ಸಂಭ್ರಮಾಚರಣೆಯ ಭರದಲ್ಲಿ ‘ಮಧ್ಯದ ಬೆರಳು’ (Middle Finger) ತೋರಿಸುವ ಮೂಲಕ ಆಕ್ಷೇಪಾರ್ಹ ಸನ್ನೆ ಮಾಡಿದ್ದರು. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಐಪಿಎಲ್ ಆಡಳಿತ ಮಂಡಳಿ ಶಿಸ್ತು ಕ್ರಮ ಕೈಗೊಂಡಿದೆ.

ಟಿಮ್ ಡೇವಿಡ್ ಅವರು ಐಪಿಎಲ್ ನೀತಿ ಸಂಹಿತೆಯ ಲೆವೆಲ್-1 ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ. ಟಿಮ್ ಡೇವಿಡ್ ಅವರ ಪಂದ್ಯದ ಸಂಭಾವನೆಯಲ್ಲಿ (Match Fee) ಶೇ. 30 ರಷ್ಟು ದಂಡ ವಿಧಿಸಲಾಗಿದೆ. ಜೊತೆಗೆ ಅವರಿಗೆ 2 ಡಿಮೆರಿಟ್ ಪಾಯಿಂಟ್‌ಗಳನ್ನು ನೀಡಲಾಗಿದೆ.

ಕೇವಲ ಆಟದ ವಿಚಾರಕ್ಕೆ ಬಂದರೆ ಆರ್‌ಸಿಬಿ ಮತ್ತು ಮುಂಬೈ ನಡುವಿನ ಪಂದ್ಯ ಕೊನೆಯ ಎಸೆತದವರೆಗೆ ಕುತೂಹಲ ಕೆರಳಿಸಿತ್ತು. ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಿ 7 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತ್ತು. ತಿಲಕ್ ವರ್ಮಾ (57) ಮತ್ತು ನಮನ್ ಧೀರ್ (47) ಉತ್ತಮ ಪ್ರದರ್ಶನ ನೀಡಿದ್ದರು.


News First 1 hour ago
Home Flash News