Select Location
All Locations
State
Region
City / District
ವಿ.ಡಿ. ಸತೀಶನ್ ಕೇರಳಂ ಸಿಎಂ, ಪಕ್ಷದ ನಿರ್ಧಾರಕ್ಕೆ ಬದ್ಧ ಎಂದ ವೇಣುಗೋಪಾಲ್

ವಿ.ಡಿ. ಸತೀಶನ್ ಕೇರಳಂ ಸಿಎಂ, ಪಕ್ಷದ ನಿರ್ಧಾರಕ್ಕೆ ಬದ್ಧ ಎಂದ ವೇಣುಗೋಪಾಲ್

ತಿರುವನಂತಪುರ/ನವದೆಹಲಿ: ಕೇರಳಂನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಆಯ್ಕೆ ಮಾಡಿದ ಪಕ್ಷದ ನಿರ್ಧಾರವನ್ನು ಒಪ್ಪಿಕೊಳ್ಳುವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಗುರುವಾರ ಹೇಳಿದ್ದಾರೆ. ಅಲ್ಲದೆ ಸತೀಶನ್ ಅವರಿಗೆ ಅಭಿನಂದನೆಯನ್ನೂ ಸಲ್ಲಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವೇಣುಗೋಪಾಲ್, ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬರುತ್ತಿದ್ದ ಮೂರು ಹೆಸರುಗಳಲ್ಲಿ ನನ್ನದೂ ಇತ್ತು ಎಂದು ಹೇಳಿದ್ದಾರೆ. ಅಲ್ಲದೆ ಹೊಸ ಮುಖ್ಯಮಂತ್ರಿಗಳಿಗೆ ಮತ್ತು ಕೇರಳದ ಯುಡಿಎಫ್ ಸರ್ಕಾರಕ್ಕೆ ತಾವು ಸಂಪೂರ್ಣ ಬೆಂಬಲ ನೀಡುವುದಾಗಿ ಅವರು ಹೇಳಿದರು. ‘ನನಗೆ ಬೆಂಬಲ ನೀಡಿದ ಶಾಸಕರಿಗೆ, ಪಕ್ಷದ ಕಾರ್ಯಕರ್ತರಿಗೆ ಹಾಗೂ ಪದಾಧಿಕಾರಿಗಳಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅಂತಿಮವಾಗಿ ಪಕ್ಷವು ಒಂದು ನಿರ್ಧಾರವನ್ನು ತೆಗೆದುಕೊಂಡಿದೆ. ಒಬ್ಬ ನಿಷ್ಠಾವಂತ ಕಾಂಗ್ರೆಸ್ಸಿಗನಾಗಿ ನಾನು ಪಕ್ಷದ ತೀರ್ಮಾನದ ಪರವಾಗಿ ನಿಲ್ಲುವೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಕೇರಳಂ ಸಿಎಂ ರೇಸ್: ಪೋಸ್ಟ್ ಹಂಚಿಕೊಂಡು ಕಾಂಗ್ರೆಸ್‌ ಕಾಲೆಳೆದ ರಾಜೀವ್ ಚಂದ್ರಶೇಖರ್ ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟವು ಮೂರನೇ ಎರಡರಷ್ಟು ಬಹುಮತವನ್ನು ಪಡೆದುಕೊಂಡಿತ್ತು. ಆದರೆ ವಿವಿಧ ಬಣಗಳ ಲಾಬಿ ಮತ್ತು ತಳಮಟ್ಟದಲ್ಲಿ ಕಾರ್ಯಕರ್ತರ ಪ್ರತಿಭಟನೆಯಿಂದಾಗಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸಲು ಪಕ್ಷಕ್ಕೆ ಸಾಧ್ಯವಾಗಿರಲಿಲ್ಲ.


Prajavani 51 minutes ago
Home Flash News