Select Location
All Locations
State
Region
City / District
ಕರ್ನಾಟಕದಲ್ಲಿ ಜೂನ್ 20 ರಿಂದ SIR ಪ್ರಾರಂಭ: ಅಕ್ಟೋಬರ್ 7ಕ್ಕೆ ಅಂತಿಮ ಪಟ್ಟಿ ಪ್ರಕಟ! ಹೇಗೆ ಮಾಡಲಾಗುತ್ತದೆ?

ಕರ್ನಾಟಕದಲ್ಲಿ ಜೂನ್ 20 ರಿಂದ SIR ಪ್ರಾರಂಭ: ಅಕ್ಟೋಬರ್ 7ಕ್ಕೆ ಅಂತಿಮ ಪಟ್ಟಿ ಪ್ರಕಟ! ಹೇಗೆ ಮಾಡಲಾಗುತ್ತದೆ?

ಬೆಂಗಳೂರು: ಕರ್ನಾಟಕದಲ್ಲಿ ಜೂನ್ 20 ರಂದು ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಲಿದ್ದು, ಅಕ್ಟೋಬರ್ 7, 2026 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ. ವಿವಿಧ ರಾಜ್ಯಗಳಲ್ಲಿ ಮೂರನೇ ಹಂತದ SIR ಪ್ರಕ್ರಿಯೆ ಆರಂಭವನ್ನು ಭಾರತೀಯ ಚುನಾವಣಾ ಆಯೋಗ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯ ಚುನಾವಣಾ ಆಯುಕ್ತರು ಈ ಮಾಹಿತಿ ನೀಡಿದ್ದಾರೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೊರತುಪಡಿಸಿ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಿಗೆ ಭಾರತೀಯ ಚುನಾವಣಾ ಆಯೋಗ SIR ಘೋಷಿಸಿದೆ. ಅಕ್ಟೋಬರ್ 1 ರಂದು SIR ಗೆ ನಿಗದಿಯಾಗಿರುವ ಅರ್ಹತಾ ದಿನಾಂಕಕ್ಕಾಗಿ ಮೇಘಾಲಯ, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ದೆಹಲಿಯೊಂದಿಗೆ ಕರ್ನಾಟಕವನ್ನು ಸೇರಿಸಲಾಗಿದೆ.

ಆಗಸ್ಟ್ 5 ರಂದು ಕರಡು ಪಟ್ಟಿ ಪ್ರಕಟ: ಇಲ್ಲಿಯವರೆಗೆ ಶೇಕಡಾ 86.37 ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿದೆ ಮತ್ತು ಆಗಸ್ಟ್ 5, 2026 ರಂದು SIR ಕರಡು ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಆಗಸ್ಟ್ 3 ರವರೆಗೂ ಮ್ಯಾಪಿಂಗ್ ಕಾರ್ಯ ಮುಂದುವರೆಯಲಿದೆ. SIR ಗಾಗಿ ಕೆಲವು ದಿನಗಳಿಂದ ಸಿದ್ಧತೆಗಳು ನಡೆಯುತ್ತಿವೆ ಮತ್ತು ಬೂತ್ ಮಟ್ಟದ ಅಧಿಕಾರಿಗಳು (BLO ಗಳು) ತಮ್ಮಗೆ ನಿಗದಿಪಡಿಸಿದ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ವಿ ಅನ್ಭು ಕುಮಾರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


Kannadapraba 25 days ago
Home Flash News