ಮುಂದಿನ ವರ್ಷದಿಂದ NEET ಪರೀಕ್ಷೆ ಕಂಪ್ಯೂಟರ್ ಆಧಾರಿತ -ಕೇಂದ್ರ ಸರ್ಕಾರ ಘೋಷಣೆ
ನೀಟ್ (NEET-UG) ಪೇಪರ್ ಲೀಕ್ ಹಗರಣದಿಂದ ಕಂಗಾಲಾಗಿದ್ದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಮಹತ್ವದ ಸುದ್ದಿ ನೀಡಿದೆ. ಪೇಪರ್ ಲೀಕ್ ಹಿನ್ನೆಲೆಯಲ್ಲಿ ರದ್ದಾಗಿದ್ದ ನೀಟ್ ಪರೀಕ್ಷೆಯ ಹೊಸ ದಿನಾಂಕವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ ಪ್ರಕಟಿಸಿದ್ದಾರೆ. ನೀಟ್ (NEET-UG) ಪೇಪರ್ ಲೀಕ್ ಹಗರಣದಿಂದ ಕಂಗಾಲಾಗಿದ್ದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಮಹತ್ವದ ಸುದ್ದಿ ನೀಡಿದೆ. ಪೇಪರ್ ಲೀಕ್ ಹಿನ್ನೆಲೆಯಲ್ಲಿ ರದ್ದಾಗಿದ್ದ ನೀಟ್ ಪರೀಕ್ಷೆಯ ಹೊಸ ದಿನಾಂಕವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ ಪ್ರಕಟಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಹಿತರಕ್ಷಣೆಯೇ ಸರ್ಕಾರದ ಮೊದಲ ಆದ್ಯತೆ ಎಂದು ತಿಳಿಸಿದ್ದು, ಪರೀಕ್ಷಾ ಅಕ್ರಮ ತಡೆಯಲು ಮುಂದಿನ ವರ್ಷದಿಂದ ಪರೀಕ್ಷಾ ಪದ್ಧತಿಯನ್ನೇ ಬದಲಿಸುವುದಾಗಿ ಘೋಷಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು ರದ್ದಾಗಿರುವ ನೀಟ್ (UG) ಪರೀಕ್ಷೆಯು ಜೂನ್ 21ರಂದು ದೇಶಾದ್ಯಂತ ಮತ್ತೆ ನಡೆಯಲಿದೆ. ಪರೀಕ್ಷೆಯ ಪ್ರವೇಶ ಪತ್ರಗಳನ್ನು ಜೂನ್ 14ರಂದು ಬಿಡುಗಡೆ ಮಾಡಲಾಗುವುದು. ಮರುಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಪರೀಕ್ಷಾ ನಗರವನ್ನು (Exam City) ಆಯ್ಕೆ ಮಾಡಿಕೊಳ್ಳಲು ಒಂದು ವಾರ ಕಾಲಾವಕಾಶ ನೀಡಲಾಗುತ್ತದೆ. ಈ ಬಾರಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ 15 ನಿಮಿಷಗಳ ಕಾಲ ಹೆಚ್ಚುವರಿ ಸಮಯವನ್ನು ನೀಡಲು ತೀರ್ಮಾನಿಸಲಾಗಿದೆ. ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು OMR ಶೀಟ್ ಮೂಲಕ ನಡೆಸುವ ಬದಲು, ಕಂಪ್ಯೂಟರ್ ಆಧಾರಿತ ಪರೀಕ್ಷೆ (Computer Based Test - CBT) ನಡೆಸಲಾಗುವುದು.
ಮೇ 3 ರಂದು ಪರೀಕ್ಷೆ ನಡೆದ ಪರೀಕ್ಷೆಯಲ್ಲಿ ಕೆಲವು ಅಕ್ರಮಗಳು ನಡೆದಿರುವ ಬಗ್ಗೆ ಮೇ 7 ರಂದು ದೂರುಗಳು ಬಂದಿದ್ದವು. ಗೆಸ್ ಪೇಪರ್‌ನ ಕೆಲವು ಪ್ರಶ್ನೆಗಳು ಅಸಲಿ ಪ್ರಶ್ನೆ ಪತ್ರಿಕೆಯಲ್ಲಿ ಬಂದಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಶಿಕ್ಷಣ ಮಾಫಿಯಾದ ಪಿತೂರಿಯಿಂದಾಗಿ ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಾರದು ಎಂಬ ಕಾರಣಕ್ಕೆ ನಾವು ಮೇ 12 ರಂದೇ ಪರೀಕ್ಷೆಯನ್ನು ರದ್ದುಗೊಳಿಸಿದ್ದೇವೆ ಎಂದು ಸಚಿವರು ವಿವರಿಸಿದರು.
ಇದು ಶಿಕ್ಷಣ ಮಾಫಿಯಾ ಮತ್ತು ಸಮಾಜವಿರೋಧಿ ಶಕ್ತಿಗಳ ವಿರುದ್ಧದ ಸುದೀರ್ಘ ಹೋರಾಟವಾಗಿದೆ. ಪ್ರಕರಣದ ತನಿಖೆಯನ್ನು ಈಗಾಗಲೇ ಸಿಬಿಐಗೆ (CBI) ವಹಿಸಲಾಗಿದೆ. ತನಿಖೆ ಆರಂಭವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವುದೇ ರೀತಿಯ ಅಕ್ರಮಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಧರ್ಮೇಂದ್ರ ಪ್ರಧಾನ್ ಎಚ್ಚರಿಕೆ ನೀಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸಚಿವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಜೂನ್ 21 ರ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಅವರು ತಿಳಿಸಿದರು.