Select Location
All Locations
State
Region
City / District
ರಾಜ್ಯದಲ್ಲಿ ಎಬೋಲಾ ಪ್ರಕರಣ ಇಲ್ಲ, ಜನರು ಆತಂಕಕ್ಕೆ ಒಳಗಾಗಬೇಡಿ: ಸಚಿವ ಗುಂಡೂರಾವ್‌

ರಾಜ್ಯದಲ್ಲಿ ಎಬೋಲಾ ಪ್ರಕರಣ ಇಲ್ಲ, ಜನರು ಆತಂಕಕ್ಕೆ ಒಳಗಾಗಬೇಡಿ: ಸಚಿವ ಗುಂಡೂರಾವ್‌

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಪ್ರಯೋಗಾಲಯ ತಪಾಸಣಾ ವರದಿ 'ನೆಗೆಟಿವ್' ಬಂದಿದೆ. ಹೀಗಾಗಿ ಜನರು ಅನಗತ್ಯವಾಗಿ ಆತಂಕಕ್ಕೆ ಒಳಗಾಗಬೇಡಿ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ವ್ಯಕ್ತಿಯೊಬ್ಬರಿಗೆ ಶಂಕಿತ ಎಬೋಲಾ ಲಕ್ಷಣಗಳು ಕಂಡು ಬಂದ ಕೂಡಲೇ ತಪಾಸಣೆ ನಡೆಸಲಾಯಿತು ಎಂದು ಹೇಳಿದ್ದಾರೆ.

ಶಂಕೆ ವ್ಯಕ್ತವಾದ ತಕ್ಷಣವೇ ಇಲಾಖೆಯು ಸಾರ್ವಜನಿಕ ಆರೋಗ್ಯ ಮಾರ್ಗಸೂಚಿಗಳ ಅನ್ವಯ ಅತ್ಯಂತ ಕಟ್ಟುನಿಟ್ಟಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ವೈದ್ಯಕೀಯ ನಿಯಮಾವಳಿಗಳನ್ನು ಪಾಲಿಸಿದೆ ಎಂದು ತಿಳಿಸಿದ್ದಾರೆ. ಜನರ ಆರೋಗ್ಯ ಮತ್ತು ಸುರಕ್ಷತೆಯೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ನಮ್ಮ ಆರೋಗ್ಯ ಇಲಾಖೆಯು ಪ್ರತಿಯೊಂದು ಪರಿಸ್ಥಿತಿಯನ್ನೂ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಯಾವುದೇ ರೀತಿಯ ಸವಾಲನ್ನು ಎದುರಿಸಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ದಿನೇಶ್‌ ಹೇಳಿದ್ದಾರೆ.

ಯಾರೂ ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು. ವದಂತಿಗಳಿಗೆ ಕಿವಿಗೊಡದೆ, ನಿಗದಿಪಡಿಸಿದ ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸಿ. ಸರ್ಕಾರ ಮತ್ತು ಆರೋಗ್ಯ ಇಲಾಖೆ ಅಧಿಕೃತವಾಗಿ ಹೊರಡಿಸುವ ಮಾಹಿತಿ ಹಾಗೂ ಪ್ರಕಟಣೆಗಳನ್ನು ಮಾತ್ರ ಆಧಾರವಾಗಿಟ್ಟುಕೊಳ್ಳಿ ಎಂದು ಮನವಿ ಮಾಡಿದ್ದಾರೆ.


Prajavani 1 hour ago
Home Flash News