Select Location
All Locations
State
Region
City / District
Operation Sindoor 2.0: ಭಾರತ ಆಪರೇಷನ್ ಸಿಂಧೂರ್ 2.0ಗೆ ತಯಾರಿ ನಡೆಸುತ್ತಿದೆ:ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ

Operation Sindoor 2.0: ಭಾರತ ಆಪರೇಷನ್ ಸಿಂಧೂರ್ 2.0ಗೆ ತಯಾರಿ ನಡೆಸುತ್ತಿದೆ:ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ

ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಭಾರತವು 'ಆಪರೇಷನ್ ಸಿಂಧೂರ್ 2.0' ಕಾರ್ಯಾಚರಣೆಗೆ ಸಂಪೂರ್ಣ ಸಜ್ಜಾಗಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನದ ಕುತಂತ್ರಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ಭಾರತೀಯ ಸೇನೆ ಸನ್ನದ್ಧವಾಗಿದೆ. ಈ ಕಾರ್ಯಾಚರಣೆಯಲ್ಲಿ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಗಳು ಜಂಟಿಯಾಗಿ ಕಾರ್ಯನಿರ್ವಹಿಸಲಿವೆ. ಪಹಲ್ಗಾಮ್ ದಾಳಿಯ ನಂತರ ಭಾರತದ ಕಠಿಣ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ದ್ವಿವೇದಿ ಸ್ಪಷ್ಟಪಡಿಸಿದ್ದಾರೆ.

ನವದೆಹಲಿ, ಮೇ 30: ಭಾರತೀಯ ಸೇನೆ(Indian Army)ಯು ಯಾವುದೇ ಕ್ಷಣದಲ್ಲೂ ಎದುರಾಳಿಗೆ ತಕ್ಕ ಪ್ರತ್ಯುತ್ತರ ನೀಡಲು ‘ಆಪರೇಷನ್ ಸಿಂಧೂರ್ 2.0’ ಕಾರ್ಯಾಚರಣೆಗೆ ಸಂಪೂರ್ಣ ಸಜ್ಜಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶನಿವಾರ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ಕುತಂತ್ರಗಳ ವಿರುದ್ಧ ಭಾರತೀಯ ಸೇನೆ ತಳೆದಿದ್ದ ಕಠಿಣ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮೂರೂ ಪಡೆಗಳ ಮಹಾ ಜಂಟಿ ಸಿದ್ಧತೆ ಪಾಕಿಸ್ತಾನದ ಹೆಸರನ್ನು ನೇರವಾಗಿ ಉಲ್ಲೇಖಿಸದೆ ಗಡಾಫಿ ಶೈಲಿಯಲ್ಲಿ ಎಚ್ಚರಿಕೆ ನೀಡಿರುವ ಜನರಲ್ ದ್ವಿವೇದಿ, ಭಾರತೀಯ ಮಿಲಿಟರಿಯ ಸನ್ನದ್ಧತೆಯನ್ನು ಎತ್ತಿ ತೋರಿಸಿದ್ದಾರೆ. ಆಪರೇಷನ್ ಸಿಂಧೂರ್ 2.0 ಸಂಭವಿಸಿದಲ್ಲಿ, ಕೇವಲ ಸೇನೆ ಮಾತ್ರವಲ್ಲದೆ ಭಾರತೀಯ ವಾಯುಪಡೆ (IAF) ಮತ್ತು ನೌಕಾಪಡೆಯೂ (Navy) ಜಂಟಿಯಾಗಿ ಅತ್ಯಂತ ಪ್ರಬಲ ದಾಳಿ ನಡೆಸಲು ಸಜ್ಜಾಗುತ್ತಿವೆ. ಪ್ರಸ್ತುತ ನಾವು ಮೂರೂ ಪಡೆಗಳ ನಡುವೆ ಸಿನರ್ಜಿ (ಪರಸ್ಪರ ಸಮನ್ವಯತೆ) ಹೆಚ್ಚಿಸುವ ಹಾಗೂ ಮುಂದಿನ ಸವಾಲಿಗೆ ನಮ್ಮನ್ನು ಸಿದ್ಧಪಡಿಸಿಕೊಳ್ಳುವತ್ತ ದಿನದ 24 ಗಂಟೆಯೂ ಗಮನಹರಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.


TV9 Kannada 1 hour ago
Home Flash News