Select Location
All Locations
State
Region
City / District
ಭರ್ಜರಿ ಮಳೆಯ ಎಚ್ಚರಿಕೆ! ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’!

ಭರ್ಜರಿ ಮಳೆಯ ಎಚ್ಚರಿಕೆ! ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’!

ರಾಜ್ಯದ ಹಲವು ಭಾಗಗಳಲ್ಲಿ ಸೋಮವಾರ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಪ್ರೀ-ಮಾನ್ಸೂನ್ ಮಳೆಯ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಸೋಮವಾರ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಲ್ಲಿ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಪ್ರೀ-ಮಾನ್ಸೂನ್ (ಮುಂಗಾರು ಪೂರ್ವ) ಮಳೆಯ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಲಿಕಾನ್ ಸಿಟಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಿರಲಿದ್ದು, ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಬೆಂಗಳೂರಿನ ಜೊತೆಗೆ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಬಾಗಲಕೋಟೆ, ವಿಜಯಪುರ, ಬೀದರ್, ಯಾದಗಿರಿ ಮತ್ತು ರಾಯಚೂರಿನಲ್ಲಿ ಕೆಲವು ಕಡೆ ಗುಡುಗು ಸಹಿತ ಮಳೆಯಾಗಿ ಹವಾಮಾನದಲ್ಲಿ ತಾತ್ಕಾಲಿಕ ಬದಲಾವಣೆಯಾಗಲಿದೆ.


News First 58 minutes ago
Home Flash News