ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ತಮಿಳುನಾಡು ಸಿಎಂ ವಿಜಯ್
ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್ 12 ರಂದು ಪ್ರಸಿದ್ಧ ಕೊಲ್ಲೂರು ಮೂಕಾಂಬಿಕ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಶುಕ್ರವಾರ ಬೆಳಗ್ಗೆ 12.30 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಲಿರುವ ವಿಜಯ್ ಸಂಜೆ 3 ಗಂಟೆಗೆ ದೇವಾಲಯದಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಸಂಚರಿಸಲಿರುವ ರಸ್ತೆ ಮಾರ್ಗ ಮತ್ತು ದೇವಾಲಯದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.
ಪ್ರವಾಸಿಗರು ಗಾಯಗೊಂಡಿದ್ದು, ಹೈದರಾಬಾದ್ ಮೂಲದ ಪವನ್ ಎಂಬವರು ಸುಪ್ರೀತ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ, ನಿಧಾನವಾಗಿ ಕಾರು ಚಲಾಯಿಸುವಂತೆ ಹೇಳಿದ್ದಕ್ಕೆ ಗಲಾಟೆ ಆರಂಭಿಸಿದ್ದಾರೆ ಎಂದು ಸುಪ್ರೀತ್ ಪ್ರತಿ ದೂರು ದಾಖಲಿಸಿದ್ದಾರೆ. ಪ್ರವಾಸಿಗರು ನನ್ನ ಕಾರಿನ ಗ್ಲಾಸ್ ಜಖಂಗೊಳಿಸಿದ್ದಾರೆ ಎಂದು ದೂರು ನೀಡಲಾಗಿದೆ. ಸುಪ್ರೀತ್ ಪತ್ನಿ ಜತೆ ಕಾರಿನಲ್ಲಿ ಬರುತ್ತಿದ್ದಾಗ ಪ್ರವಾಸಿಗರು ಗಲಾಟೆ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದು , ತನ್ನ ಮೇಲೆ ಕುರ್ಚಿ ಹಾಗೂ ಫೋಟೋ ಸ್ಟ್ಯಾಂಡ್ ನಿಂದ ಹಲ್ಲೆ ನಡೆಸಿದ ಪರಿಣಾಮ ಬಾಯಿಯಿಂದ ರಕ್ತಸ್ರಾವ ಆಗಿರುವುದಾಗಿ ಹೇಳಿಕೊಂಡಿದ್ದಾರೆ.
ಆಂಧ್ರಪ್ರದೇಶದ ಪ್ರವಾಸಿಗರು ಮಹಿಳೆ, ಮಕ್ಕಳ ಜತೆ ಉಡುಪಿಗೆ ಬಂದಿದ್ದರು. ತೀವ್ರ ವಾಗ್ವಾದ, ಹೊಡೆದಾಟ ನಡೆಯುವುದನ್ನು ಗಮನಿಸಿ ಸ್ಥಳಕ್ಕೆ ಬಂದ ಸ್ಥಳೀಯರು ಗಲಾಟೆ ನಿಲ್ಲಿಸಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಎರಡೂ ಕಡೆಯಿಂದ ದೂರು ಸಲ್ಲಿಸಲಾಗಿದ್ದು,ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಂದು ಪ್ರಕರಣದಲ್ಲಿನ ಆರೋಪಿ ಸುಪ್ರೀತ್ ಕುಮಾರ್(40)ನನ್ನು ಪೊಲೀಸರು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಘಟನೆಯ ವಿಡಿಯೋವನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.