ಯುಜಿಸಿಇಟಿ ಮೊದಲ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ-ಕೆಇಎ
ಬೆಂಗಳೂರು: ಎಂಜಿನಿಯರಿಂಗ್(Engineering) ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೋಮವಾರ ರಾತ್ರಿ ಪ್ರಕಟಿಸಿದೆ. ನಿರೀಕ್ಷೆ ಪ್ರಕಾರ ಜುಲೈ 14ರಂದು ಪ್ರಕಟಿಸಬೇಕಿತ್ತು. ಆದರೆ ನಿಗದಿಗಿಂತ ಮೊದಲೇ ಫಲಿತಾಂಶ(Result) ಹೊರಬಿದ್ದಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ
ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆ ಇದ್ದಲ್ಲಿ ಜುಲೈ 14ರಂದು ಸಂಜೆ 5ಗಂಟೆಯೊಳಗೆ ಆನ್ ಲೈನ್ ಮೂಲಕ ಸಲ್ಲಿಸಬಹುದು. ಜುಲೈ 9ರಂದು ಬೆಳಿಗ್ಗೆ 11 ಗಂಟೆವರೆಗೆ ದಾಖಲಿಸಿದ್ದ ಇಚ್ಛೆ/ಆಯ್ಕೆಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.