465 ಬೀದಿ ನಾಯಿಗಳಿಗೆ ಶಸ್ತ್ರಚಿಕಿತ್ಸೆ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 69,341 ಬೀದಿ ನಾಯಿಗಳಿದ್ದು, ಅವುಗಳಲ್ಲಿ 465 ನಾಯಿಗಳಿಗೆ ಒಂದು ತಿಂಗಳಿನಲ್ಲಿ ರೇಬಿಸ್ ಲಸಿಕೆ ಹಾಗೂ ಸಂತಾನಶಕ್ತಿಹರಣ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಪಶ್ಚಿಮ ನಗರ ಪಾಲಿಕೆಯ ವಲಯ–2ರ ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಸವೇಶ್ವರನಗರ ವಾರ್ಡ್‌ನಲ್ಲಿ ಶ್ವಾನಗಳ ಲಸಿಕಾಕರಣ ಕಾರ್ಯಕ್ರಮದ ಸಂಬಂಧ ಮಂಗಳವಾರ ಪಾಲಿಕೆಯ ಪಶುಪಾಲನಾ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಲಸಿಕಾಕರಣ ಕಾರ್ಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ಹೇಳಿದ್ದಾರೆ. ಬೆಂಗಳೂರಿನ ಇತರೆ ಪಾಲಿಕೆಗಳ ವ್ಯಾಪ್ತಿಯಲ್ಲೂ ಬೀದಿ ನಾಯಿಗಳ ಸಂತಾನಶಕ್ತಿಹರಣ ಚಿಕಿತ್ಸಾ ಕಾರ್ಯ ವೇಗದಿಂದ ಸಾಗಿದೆ ಎಂದು ತಿಳಿಸಿದ್ದಾರೆ.