Select Location
All Locations
State
Region
City / District
ಯುವಕರ ಮೇಲೆ ಲಾಠಿ ಬೀಸುವವರಿಗೆ ಸಂವಿಧಾನವೇ ಪಾಠ ಕಲಿಸಲಿದೆ": CJP ಪ್ರತಿಭಟನೆ ಮೇಲಿನ ಪೊಲೀಸ್ ಕ್ರಮಕ್ಕೆ ಕಾಂಗ್ರೆಸ್ ಕಿಡಿ

ಯುವಕರ ಮೇಲೆ ಲಾಠಿ ಬೀಸುವವರಿಗೆ ಸಂವಿಧಾನವೇ ಪಾಠ ಕಲಿಸಲಿದೆ": CJP ಪ್ರತಿಭಟನೆ ಮೇಲಿನ ಪೊಲೀಸ್ ಕ್ರಮಕ್ಕೆ ಕಾಂಗ್ರೆಸ್ ಕಿಡಿ

ನವದೆಹಲಿ: ಕಾಕ್‌ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ 'ಸಂಸತ್ ಚಲೋ' ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಮತ್ತು ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಕ್ರಮವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.

ದೇಶದ ಯುವಕರ ಮೇಲಿನ ಈ ದಮನವನ್ನು "ನಾಚಿಕೆಗೇಡಿನ ಅಧ್ಯಾಯ" ಎಂದು ಬಣ್ಣಿಸಿರುವ ಕಾಂಗ್ರೆಸ್, ಅಧಿಕಾರದಲ್ಲಿರುವವರ ಆದೇಶದ ಮೇರೆಗೆ ಯುವಕರ ಮೇಲೆ ಲಾಠಿ ಬೀಸುವವರು "ನಾಳೆ ಸಂವಿಧಾನದ ಲಾಠಿ ಎದುರಿಸಬೇಕಾಗುತ್ತದೆ" ಎಂದು ಎಚ್ಚರಿಕೆ ನೀಡಿದೆ.

ಈ ಕುರಿತು ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಹಂಚಿಕೊಂಡರು.

ದೇಶದ ಯುವ ಜನರ ಮೇಲೆ ನಡೆಯುತ್ತಿರುವ ಅನ್ಯಾಯಗಳ ಪಟ್ಟಿಗೆ ನಿನ್ನೆಯ ಘಟನೆ ಮತ್ತೊಂದು ನಾಚಿಕೆಗೇಡಿನ ಅಧ್ಯಾಯವಾಗಿದೆ. ಅಧಿಕಾರದಲ್ಲಿರುವವರ ಸೂಚನೆಯಂತೆ ಇಂದು ದೇಶದ ಯುವಕರನ್ನು ಥಳಿಸುತ್ತಿರುವವರು, ನಾಳೆ ಸಂವಿಧಾನದ ಲಾಠಿಯನ್ನು ಎದುರಿಸಬೇಕಾಗುತ್ತದೆ" ಎಂದು ಹೇಳಿದ್ದಾರೆ.

ಈ ನಡುವೆ ಪ್ರತಿಭಟನೆ ಬಳಿಕ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರನ್ನು "ಭಾರತದ ಇತಿಹಾಸದಲ್ಲೇ ಅತ್ಯಂತ ಯುವ ವಿರೋಧಿ ಪ್ರಧಾನಿ" ಎಂದು ಟೀಕಿಸಿದ್ದಾರೆ.

"ಪ್ರಧಾನಿ ಮೋದಿ ಯುವಕರಿಗೆ ಎಷ್ಟು ವಿರೋಧಿಯಾಗಿದ್ದಾರೆಂದರೆ, ವಿಫಲ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನೂ ಪಡೆಯಲು ಸಾಧ್ಯವಾಗುತ್ತಿಲ್ಲ" ಎಂದು ಆರೋಪಿಸಿದ್ದಾರೆ.

ಅಲ್ಲದೆ, "152 ಪ್ರಶ್ನೆಪತ್ರಿಕೆ ಸೋರಿಕೆ, 7.5 ಕೋಟಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ, ಒಬ್ಬ ತಪ್ಪಿತಸ್ಥನಿಗೂ ಶಿಕ್ಷೆಯಾಗಿಲ್ಲ. ಶಿಕ್ಷೆಯಾದದ್ದು ಶ್ರಮಪಟ್ಟು ಓದಿದ ಯುವಕರಿಗೆ ಮಾತ್ರ ಎಂದು ಹೇಳಿದ್ದಾರೆ.


Kannadapraba 6 hours ago
Home Flash News