Select Location
All Locations
State
Region
City / District
ಸೋನಂ ವಾಗ್ಚುಕ್ ಆರೋಗ್ಯದ ಬಗ್ಗೆ ಪ್ರಧಾನಿ ಮೋದಿ ಕಾಳಜಿ; ಸೆಲ್ಫಿ ವಿಡಿಯೋ ಮೂಲಕ ನೀಡಿದ್ರು ಅಮೂಲ್ಯ ಸಲಹೆ

ಸೋನಂ ವಾಗ್ಚುಕ್ ಆರೋಗ್ಯದ ಬಗ್ಗೆ ಪ್ರಧಾನಿ ಮೋದಿ ಕಾಳಜಿ; ಸೆಲ್ಫಿ ವಿಡಿಯೋ ಮೂಲಕ ನೀಡಿದ್ರು ಅಮೂಲ್ಯ ಸಲಹೆ

ಗುರುಗ್ರಾಮ: ಕಳೆದ 26 ದಿನಗಳಿಂದ ಲಡಾಖ್‌ ಹಿತರಕ್ಷಣೆ ಮತ್ತು ವಿದ್ಯಾರ್ಥಿಗಳ ಪರವಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಸೋನಂ ವಾಂಗ್ಚುಕ್ ಶನಿವಾರ ತಮ್ಮ ನಿರಶನವನ್ನು ಅಂತ್ಯಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವ್ಯಕ್ತಪಡಿಸಿ, ಮಹತ್ವದ ಸಲಹೆ ನೀಡಿದ್ದಾರೆ.

ಶೀಘ್ರವೇ ಹಳೆಯ ತೂಕಕ್ಕೆ ಮರಳಿ ವಾಂಗ್ಚುಕ್ ಅವರು ಉಪವಾಸ ಕೈಬಿಟ್ಟ ಬೆನ್ನಲ್ಲೇ 'ಎಕ್ಸ್' (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಸೋನಂ ಜೀ ಅವರು ತಮ್ಮ ದೈನಂದಿನ ಜೀವನದಲ್ಲಿ ವೈದ್ಯರ ಸಲಹೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಆದಷ್ಟು ಬೇಗ ತಮ್ಮ ಹಳೆಯ ತೂಕವನ್ನು (Old Weight) ಮರಳಿ ಪಡೆಯಬೇಕು ಎಂದು ನಾನು ವಿನಂತಿಸುತ್ತೇನೆ. ಅವರ ಉತ್ತಮ ಆರೋಗ್ಯಕ್ಕಾಗಿ ನಾನು ಸರ್ವಶಕ್ತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಉಪವಾಸ ಅಂತ್ಯಕ್ಕೆ ಕಾರಣವೇನು? ಜೂನ್ 28 ರಿಂದ ದೆಹಲಿಯ ಜಂತರ್ ಮಂತರ್ ಪ್ರತಿಭಟನಾಕಾರರ ಪರವಾಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ವಾಂಗ್ಚುಕ್, ಕೇಂದ್ರ ಸರ್ಕಾರದ ಭರವಸೆಯ ಮೇರೆಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿರಶನ ಅಂತ್ಯಗೊಳಿಸಿದರು. ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು ವಾಂಗ್ಚುಕ್ ಅವರಿಗೆ ಜ್ಯೂಸ್ ಕುಡಿಸುವ ಮೂಲಕ ಉಪವಾಸ ಮುರಿಸಿದರು.

ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ ಮತ್ತು ಪೇಪರ್ ಲೀಕ್ ಪ್ರಕರಣಗಳ ಬಗ್ಗೆ ಸಂಸತ್ತಿನಲ್ಲಿ ಸುಧಾರಣಾ ಕ್ರಮಗಳನ್ನು ಚರ್ಚಿಸಲಾಗುವುದು ಎಂಬ ಸರ್ಕಾರದ ಭರವಸೆಯ ನಂತರ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ. ಇದೇ ವೇಳೆ ಪೇಪರ್ ಲೀಕ್ ಹಗರಣದ ಬಗ್ಗೆಯೂ ಮಾತನಾಡಿರುವ ಪ್ರಧಾನಿ ಮೋದಿ, ಇದು ಲಕ್ಷಾಂತರ ವಿದ್ಯಾರ್ಥಿಗಳಿಗೆ ನೋವು ತಂದಿರುವ ವಿಚಾರ. ಈ ಬಗ್ಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಲು ಸೂಚನೆ ನೀಡಿದ್ದೇನೆ. ಸೋಮವಾರದಿಂದ ಸಂಸತ್ತಿನಲ್ಲಿ ಈ ಕುರಿತು ಹೊಸ ಬಿಲ್ ಮಂಡಿಸಿ, ಕಠಿಣ ಕಾನೂನು ತರಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರು ವಾಂಗ್ಚುಕ್ ಅವರ ನಿರ್ಧಾರವನ್ನು ಸ್ವಾಗತಿಸಿದ್ದು, ನಿಮ್ಮ ಜೀವನ ದೇಶಕ್ಕೆ ಬಹಳ ಅಮೂಲ್ಯವಾದುದು. ನಿಮ್ಮ ತ್ಯಾಗ ಇಡೀ ರಾಷ್ಟ್ರದ ಆತ್ಮಸಾಕ್ಷಿಯನ್ನು ಬಡಿದೆಬ್ಬಿಸಿದೆ ಎಂದು ಶ್ಲಾಘಿಸಿದ್ದಾರೆ.

ವಾಂಗ್ಚುಕ್ ಅವರು ಉಪವಾಸ ಕೈಬಿಟ್ಟಿರುವುದಕ್ಕೆ ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ನಿಮ್ಮ ಹೋರಾಟ ಇಡೀ ದೇಶದ ಆತ್ಮಸಾಕ್ಷಿಯನ್ನು ಬಡಿದೆಬ್ಬಿಸಿದೆ ಎಂದು ಅವರು ವಾಂಗ್ಚುಕ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಆದರೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡುವವರೆಗೂ ಜಂತರ್ ಮಂತರ್‌ನಲ್ಲಿ ತಮ್ಮ ಪಕ್ಷದ ಪ್ರತಿಭಟನೆ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.


Asianet News 58 minutes ago
Home Flash News