ವಿದ್ಯಾರ್ಥಿಗಳ ಶಕ್ತಿ ಚಿರಾಯುವಾಗಲಿ: ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಸಿಜೆಪಿ ವಿಜಯೋತ್ಸವ
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ (Cockroach Janta Party) ವಿಜಯೋತ್ಸವ ಆಚರಿಸಿದೆ. ʼವಿದ್ಯಾರ್ಥಿಗಳ ಶಕ್ತಿ ಚಿರಾಯುವಾಗಲಿʼ ಎಂದು ಸಿಜೆಪಿ ಪೋಸ್ಟ್ ಹಂಚಿಕೊಂಡಿದೆ. ಹೊಸದಾಗಿ ರೂಪುಗೊಂಡ ವಿಡಂಬನಾತ್ಮಕ ರಾಜಕೀಯ ಗುಂಪಾದ ಸಿಜೆಪಿಯ ಸದಸ್ಯರು, ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದಂತೆ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿತು. ಜೂನ್‌ನಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಧರಣಿ ನಡೆಸಿದರು.
ಸಿಜೆಪಿ ಮತ್ತು ಕೇಂದ್ರದ ನಡುವಿನ ಮೂರನೇ ಸುತ್ತಿನ ಮಾತುಕತೆ ಹೊತ್ತಿನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಪ್ರಧಾನ್ ರಾಜೀನಾಮೆ ಘೋಷಿಸಿದ್ದಾರೆ.