Mangaluru: ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಚಿವ ಯು.ಟಿ. ಖಾದರ್
ಮಂಗಳೂರು: ದ.ಕನ್ನಡ ಜಿಲ್ಲಾಡಳಿತ ವತಿಯಿಂದ 80ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ ಶನಿವಾರ (ಆ.15) ಮಂಗಳೂರಿನ ನೆಹರೂ ಮೈದಾನದಲ್ಲಿ ಸಂಭ್ರಮದಿಂದ ನೆರವೇರಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪ ಸಂಖ್ಯಾಕರ ಕಲ್ಯಾಣ ಇಲಾಖೆ, ಹಜ್ ಹಾಗೂ ವಕ್ಫ್ ಖಾತೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ತೆರದ ವಾಹನದಲ್ಲಿ ಪೆರೇಡ್ ಗೌರವ ವಂದನೆ ಸ್ವೀಕರಿಸಿ, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.
ಸಂಸದ ಕ್ಯಾ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ'ಸೋಜಾ, ಎಸ್.ಎಲ್ ಭೋಜೇಗೌಡ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೇರಿದಂತೆ ಜನಪ್ರತಿನಿಧಿಗಳು, ನಿಗಮಮಂಡಳಿಗಳ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.