ಭಯೋತ್ಪಾದನೆಗೆ ಆಶ್ರಯ ನೀಡುವ ದೇಶದೊಂದಿಗೆ ಸಿಂಧೂ ಒಪ್ಪಂದ ತಡೆ ನಿರ್ಣಾಯಕ ನಡೆ: ರಾಷ್ಟ್ರಪತಿ
ನವದೆಹಲಿ: ದೇಶದ ಹಿತಾಸಕ್ತಿ, ವಿಶೇಷವಾಗಿ ರೈತರ ಹಿತದೃಷ್ಟಿಯಿಂದ ಭಯೋತ್ಪಾದನೆಗೆ ಆಶ್ರಯ ನೀಡುವ ರಾಷ್ಟ್ರದೊಂದಿಗೆ ‘ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ’ವನ್ನು ಅಮಾನತುಗೊಳಿಸಿರುವುದು ರಾಷ್ಟ್ರೀಯ ಹಿತಾಸಕ್ತಿ ಹಾಗೂ ದೇಶದ ರೈತರ ಹಿತದೃಷ್ಟಿಯಿಂದ ಕೈಗೊಂಡ ಅತ್ಯಂತ ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಬಣ್ಣಿಸಿದ್ದಾರೆ. 80ನೇ ಸ್ವಾತಂತ್ರ್ಯೋತ್ಸವದ ಮುನ್ನಾದಿನವಾದ ಗುರುವಾರ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಭಯೋತ್ಪಾದನೆ ಮತ್ತು ಅದನ್ನು ಬೆಂಬಲಿಸುವ ಶಕ್ತಿಗಳ ವಿರುದ್ಧ ಕಠಿಣ ನಿಲುವು ವ್ಯಕ್ತಪಡಿಸಿದ ರಾಷ್ಟ್ರಪತಿಗಳು, "ಉಗ್ರರು ಮತ್ತು ಅವರಿಗೆ ನೆರವು ನೀಡುವವರು ಎಲ್ಲೇ ಅಡಗಿಕುಳಿತಿದ್ದರೂ ತಕ್ಕ ಪರಿಣಾಮವನ್ನು ಎದುರಿಸಲೇಬೇಕಾಗುತ್ತದೆ" ಎಂದು ಎಚ್ಚರಿಸಿದರು.
ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ‘ಆಪರೇಷನ್ ಸಿಂದೂರ್ ಕಾರ್ಯಾಚರಣೆಯು ಉಗ್ರ ಜಾಲಗಳ ಮೇಲೆ ನಿಖರ ದಾಳಿ ನಡೆಸುವ ದೇಶದ ಮಿಲಿಟರಿ ಸಾಮರ್ಥ್ಯವನ್ನು ಜಗತ್ತಿಗೆ ಸಾಬೀತುಪಡಿಸಿದೆ ಎಂದು ಅವರು ಶ್ಲಾಘಿಸಿದರು. ಸಿಂಧೂ ನದಿ ಒಪ್ಪಂದ ಅಮಾನತು ಪಹಲ್ಗಾಮ್ ಉಗ್ರರ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ 1960ರ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಭಾರತ ರದ್ದುಗೊಳಿಸಿತ್ತು. ಈ ನಿರ್ಧಾರವನ್ನು ಬೆಂಬಲಿಸಿ ಮಾತನಾಡಿದ ರಾಷ್ಟ್ರಪತಿಗಳು, ದೇಶದ ಕೃಷಿಕರ ಹಿತರಕ್ಷಣೆ ಮತ್ತು ಗಡಿ ಭದ್ರತೆಯ ದೃಷ್ಟಿಯಿಂದ ಈ ರಾಜತಾಂತ್ರಿಕ ಹಾಗೂ ತಂತ್ರಾತ್ಮಕ ನಡೆ ಅತ್ಯಗತ್ಯವಾಗಿತ್ತು ಎಂದು ಪ್ರತಿಪಾದಿಸಿದರು.