... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Sri.Balaji,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ಕಾಡ್ಗಿಚ್ಚು : ಬೆಂಕಿ ಇಡುವವರ ಪತ್ತೆಗೆ ಡ್ರೋನ್‌

ಬೆಂಗಳೂರು : ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ಕಾಡ್ಗಿಚ್ಚು ಹೆಚ್ಚುತ್ತಿದೆ. ಆದರೆ, ಅದು ನೈಸರ್ಗಿಕವಾಗಿ ಉಂಟಾಗುತ್ತಿದೆಯೇ ಅಥವಾ ಕಿಡಿಗೇಡಿಗಳು ಸೃಷ್ಟಿ ಮಾಡುತ್ತಿದ್ದಾರೆಯೇ ಎಂಬುದನ್ನು ಅರಿಯಲು ಡ್ರೋನ್‌ ಕ್ಯಾಮೆರಾ ಬಳಸಿ ಕಾಡ್ಗಿಚ್ಚಿಗೆ ಮೂಲ ಕಾರಣ ತಿಳಿಯಲು ಇಲಾಖೆ ಮುಂದಾಗಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನ ಪ್ರಮಾಣ ಹೆಚ್ಚುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಕುದುರೆಮುಖ ರಾಷ್ಟ್ರೀಯ ಉದ್ಯಾನ, ಕರ್ಜಗಿ ಮೀಸಲು ಅರಣ್ಯ, ಕೊಡಗಿನ ಇಗ್ಗುತಪ್ಪ, ನಾಲಾಡಿ ಬೆಟ್ಟ ಪ್ರದೇಶ, ಚಾಮುಂಡಿ ಬೆಟ್ಟ ಮತ್ತಿತರ ಕಡೆ ಕಾಡ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಅರಣ್ಯ ಭೂಮಿ ಆಹುತಿಯಾಗಿತ್ತು. ಕಾಡ್ಗಿಚ್ಚಿಗೆ ಸೂಕ್ತ ಕಾರಣ ತಿಳಿಯಲು ಹಾಗೂ ಮಾನವನಿಂದ ಕಾಡ್ಗಿಚ್ಚು ಸೃಷ್ಟಿಯಾಗುತ್ತಿದೆಯೇ ಎಂಬುದನ್ನು ಅರಿಯಲು ಅರಣ್ಯ ಪ್ರದೇಶದಲ್ಲಿ ಡ್ರೋನ್‌ ಮೂಲಕ ಕಾವಲು ಕಾಯಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ಡ್ರೋನ್‌ ಗಸ್ತು: ಚಿಕ್ಕಮಗಳೂರಿನಲ್ಲಿ ಡ್ರೋನ್‌ ಕ್ಯಾಮೆರಾ ಬಳಕೆ ಈಗಾಗಲೇ ಆರಂಭಿಸಲಾಗಿದ್ದು, ಬೆಟ್ಟ ಪ್ರದೇಶ, ಹುಲ್ಲುಗಾವಲು ಹೆಚ್ಚಿರುವ ಅರಣ್ಯ ಭಾಗದಲ್ಲಿ ಡ್ರೋನ್‌ ಕ್ಯಾಮೆರಾ ಗಸ್ತು ಶುರುವಾಗಿದೆ. ಡ್ರೋನ್ ಕ್ಯಾಮೆರಾ ಹಾರಿಸುವ ಸಂದರ್ಭದಲ್ಲಿ ಅರಣ್ಯ ಪ್ರದೇಶದಲ್ಲಿ ಜನ ಸಂಚಾರ ಇದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ನಿಯಮಿತವಾಗಿ ಬೆಳಗ್ಗೆ ಹಾಗೂ ಮಧ್ಯಾಹ್ನ ವೇಳೆಗೆ ಡ್ರೋನ್‌ ಕ್ಯಾಮೆರಾವನ್ನು ಅರಣ್ಯ ಪ್ರದೇಶದಲ್ಲಿ ಹಾರಾಟ ನಡೆಸಿ ದೃಶ್ಯಗಳನ್ನು ಸೆರೆ ಹಿಡಿಯಲಾಗುತ್ತದೆ. ಹೀಗೆ ಸೆರೆ ಹಿಡಿಯಲಾಗುವ ದೃಶ್ಯಗಳಲ್ಲಿ ಬೆಂಕಿ ಬಿದ್ದ ಸ್ಥಳದಲ್ಲಿ ಜನ ಸಂಚಾರ ಕಂಡು ಬಂದು, ಅನುಮಾನ ಬಂದರೆ ಅಂಥವರನ್ನು ವಿಚಾರಣೆಗೊಳಪಡಿಸಲಾಗುತ್ತದೆ. ಅಲ್ಲದೆ, ಡ್ರೋನ್‌ ಕ್ಯಾಮೆರಾ ಬಳಕೆ ಮತ್ತು ವೀಡಿಯೋ ಪರಿಶೀಲನೆಗಾಗಿ ಹೆಚ್ಚುವರಿ ಸಿಬ್ಬಂದಿಯನ್ನೂ ನೇಮಿಸಲಾಗಿದೆ.

Source : Smacy News

18 hours ago

Home Flash News