ಬೆಂಗಳೂರು : ಪ್ರಕರಣವೊಂದರಲ್ಲಿ ಆರೋಪಿಯನ್ನು ಬಂಧಿಸುವ ಸಮಯದಲ್ಲಿ ಸೂಕ್ತ ಕಾರಣ ನೀಡದ ಪೊಲೀಸರ ಕರ್ತವ್ಯ ಲೋಪ ಪರಿಗಣಿಸಿ ಬಂಧಿಸಲ್ಪಟ್ಟ ವ್ಯಕ್ತಿಗೆ ಹೈಕೋರ್ಟ್ ಜಾಮೀನು ನೀಡಿದೆ. ಮದುವೆಯಾಗುವುದಾಗಿ ಭರವಸೆ ನೀಡಿ ಲೈಂಗಿಕ ಕ್ರಿಯೆಯಲ್ಲಿ ತೊಡಗಲು ಮಹಿಳೆಯನ್ನು ಪ್ರೇರೇಪಿಸಿದ ಆರೋಪ ಮೇಲೆ ಉಡುಪಿಯ ಮಹಿಳಾ ಠಾಣೆ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಅನುದೀಪ್ ಪುತ್ತೂರು ಎಂಬುವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಅವರ ಪೀಠ ಈ ಆದೇಶ ಮಾಡಿದೆ.ಬಂಧನಕ್ಕೆ ಪೊಲೀಸರು ಸೂಕ್ತ ಕಾರಣ ನೀಡಿಲ್ಲ. ಪೊಲೀಸರ ಈ ನಡೆ ಸಂವಿಧಾನದ ಪರಿಚ್ಛೇದ 22(1)ರ ಉಲ್ಲಂಘನೆ ಎಂದು ಅರ್ಜಿದಾರರ ವಾದವಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) 2023ರ ಸೆಕ್ಷನ್ 48(2) ಅಡಿ ಆರೋಪಿ ಬಂಧನ ವೇಳೆ ನೀಡಿದ ನೋಟಿಸ್‌ನಲ್ಲೂ ಆರೋಪಿ ವಿರುದ್ಧ ದೂರು ದಾಖಲಾಗಿರುವ ಅಂಶ ಹೊರತುಪಡಿಸಿ ಬಂಧಿಸಲು ಯಾವುದೇ ಕಾರಣ ಬಹಿರಂಗಪಡಿಸಿಲ್ಲ. ಆದ್ದರಿಂದ ಅರ್ಜಿದಾರನನ್ನು ಬಂಧಿಸಿರುವುದು ಸಂವಿಧಾನ ಪರಿಚ್ಛೇದ 22(1)ರ ಉಲ್ಲಂಘನೆಯಾಗಿದ್ದು, ಜಾಮೀನು ನೀಡಬಹುದು ಎಂದು ಪೀಠ ಆದೇಶದಲ್ಲಿ ತಿಳಿಸಿದೆ.
ಪ್ರಕರಣವೊಂದರಲ್ಲಿ ಬಂಧನಕ್ಕೆ ಪೊಲೀಸರು ಕಾರಣ ನೀಡದ್ದಕ್ಕೆ ಆರೋಪಿಗೆ ಹೈಕೋರ್ಟ್ ಬೇಲ್!
Source : Smacy News
6 hours ago