Pakistan Cricket's Massive Champions Trophy Loss: 2025ರ ಚಾಂಪಿಯನ್ಸ್ ಟ್ರೋಫಿ ಆಯೋಜಿಸಿದ ಪಾಕಿಸ್ತಾನಕ್ಕೆ ಭಾರಿ ಆರ್ಥಿಕ ಹೊಡೆತ ಬಿದ್ದಿದೆ. ದಿ ಟೆಲಿಗ್ರಾಫ್ ವರದಿಯ ಪ್ರಕಾರ, ಪಿಸಿಬಿ ಸುಮಾರು 85 ಮಿಲಿಯನ್ ಡಾಲರ್ ನಷ್ಟ ಅನುಭವಿಸಿದೆ. ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಿದ್ಧತೆಗಳಿಗೆ ಭಾರಿ ಹಣ ಖರ್ಚಾಗಿದೆ. ಆದರೆ ಈ ಟೂರ್ನಿ ಆಯೋಜನೆಯಿಂದ ಪಾಕ್ ತಂಡಕ್ಕೆ ಸಿಕ್ಕ ಆದಾಯದಲ್ಲಿ ಭಾರಿ ಕುಸಿತ ಕಂಡುಬಂದಿದೆ. ಹಲವು ವರ್ಷಗಳ ನಂತರ ಐಸಿಸಿ ಟೂರ್ನಿಯೊಂದನ್ನು ಆಯೋಜಿಸುವ ಹಕ್ಕು ಪಡೆದು, 2025 ರ ಚಾಂಪಿಯನ್ಸ್ ಟ್ರೋಫಿಗೆ ಆತಿಥ್ಯವಹಿಸಿದ್ದ ಪಾಕಿಸ್ತಾನಕ್ಕೆ ಸಾವಿರಾರು ಕೋಟಿಗಳಷ್ಟು ನಷ್ಟವುಂಟಾಗಿದೆ ಎಂದು ವರದಿಯಾಗಿದೆ. ಚಾಂಪಿಯನ್ಸ್ ಟ್ರೋಫಿಯ ಆಯೋಜಕತ್ವದಿಂದ ಭರ್ಜರಿ ಆದಾಯ ಬರುವ ನಿರೀಕ್ಷೆಯಲ್ಲಿದ್ದ ಪಿಸಿಬಿಗೆ ಬರ ಸಿಡಿಲು ಬಡಿದಂತ್ತಾಗಿದೆ. ಭಾರತದೊಂದಿಗೆ ಜಿದ್ದಿಗೆ ಬಿದ್ದು ನಾನಾ ಷರತ್ತುಗಳೊಂದಿಗೆ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸಿದ್ದ ಪಾಕಿಸ್ತಾನ ಮೊದಲ ಸುತ್ತಿನಲ್ಲಿಯೇ ಪಂದ್ಯಾವಳಿಯಿಂದ ಹೊರಬಿತ್ತು. ಇದೀಗ ಈ ಪಂದ್ಯಾವಳಿಯಿಂದಾಗಿ ಪಾಕಿಸ್ತಾನದ ದೇಶೀಯ ಆಟಗಾರರ ಸಂಬಳವೂ ಕಡಿಮೆಯಾಗಿದೆ. ವರದಿಯ ಪ್ರಕಾರ, ಪಂದ್ಯಾವಳಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು 2383 ಕೋಟಿ ರೂ. ನಷ್ಟವನ್ನು ಅನುಭವಿಸಿದೆ ಎಂದು ಹೇಳಲಾಗುತ್ತಿದೆ.
ಭಾರತದ ವಿರುದ್ಧ ಜಿದ್ದಿಗೆ ಬಿದ್ದು ಚಾಂಪಿಯನ್ಸ್ ಟ್ರೋಫಿ ಆಯೋಜಿಸಿದ್ದ ಪಾಕಿಸ್ತಾನಕ್ಕೆ 2383 ಕೋಟಿ ನಷ್ಟ..!
Source : Smacy News
20 hours ago