ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ತೀವ್ರಗೊಂಡಿದ್ದು ಗುರುವಾರ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 30 ನಕ್ಸಲರು ಸಾವನ್ನಪ್ಪಿದ್ದಾರೆ. ಇದೇ ವೇಳೆ ಓರ್ವ ಭದ್ರತಾ ಸಿಬ್ಬಂದಿ ಕೂಡಾ ಹುತಾತ್ಮರಾಗಿದ್ದಾರೆ. ಬಿಜಾಪುರ/ನವದೆಹಲಿ (ಮಾ.21): ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ತೀವ್ರಗೊಂಡಿದ್ದು ಗುರುವಾರ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 30 ನಕ್ಸಲರು ಸಾವನ್ನಪ್ಪಿದ್ದಾರೆ. ಇದೇ ವೇಳೆ ಓರ್ವ ಭದ್ರತಾ ಸಿಬ್ಬಂದಿ ಕೂಡಾ ಹುತಾತ್ಮರಾಗಿದ್ದಾರೆ. ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 7 ಗಂಟೆ ವೇಳೆಗೆ ನಡೆದ ಎನ್ಕೌಂಟರ್‌ನಲ್ಲಿ 26 ನಕ್ಸಲರು ಸಾವನ್ನಪ್ಪಿದ್ದರೆ, ಕಂಕೇರ್ ವಲಯದಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ 4 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಪಡೆಗಳು ಮಾಹಿತಿ ನೀಡಿವೆ. ಬಿಜಾಪುರ ಎನ್‌ಕೌಂಟರ್ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ.ಇದರೊಂದಿಗೆ ಈ ವರ್ಷವೊಂದರಲ್ಲೇ ಭದ್ರತಾ ಪಡೆಗಳ ಗುಂಡಿಗೆ ಬಲಿಯಾದ ನಕ್ಸಲರ ಸಂಖ್ಯೆ 113ಕ್ಕೆ ತಲುಪಿದೆ. ಈ ಪೈಕಿ ಬಸ್ತರ್ ವಲಯವೊಂದರಲ್ಲೇ 97 ನಕ್ಸಲರು ಹತರಾಗಿದ್ದಾರೆ.
ಛತ್ತೀಸ್ ಗಢದಲ್ಲಿ ಕಾರ್ಯಾಚರಣೆ ತೀವ್ರ : 30 ನಕ್ಸಲರ ಹತ್ಯೆ, ಓರ್ವ ಯೋಧ ಹುತಾತ್ಮ
Source : Smacy News
1 month ago