– ನಿನ್ನೆಯಿಂದ 6 ಬಾರಿ ಭೂಕಂಪ, ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆ ನೇಪಿಟಾವ್/ಬ್ಯಾಂಕಾಕ್: ಮಯನ್ಮಾರ್‌ನಲ್ಲಿ (Myanmar) ನಿನ್ನೆಯಿಂದ 6 ಬಾರಿ ಭೂಕಂಪ ಸಂಭವಿಸಿದ್ದು, ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಈ ಕ್ಷಣದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 694ಕ್ಕೆ ಏರಿಕೆಯಾಗಿದ್ದು, 1,600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅವಶೇಷಗಳ ಅಡಿ ಇನ್ನೂ ನೂರಾರು ಮಂದಿ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿರುವ ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ. ರಸ್ತೆಗಳಲ್ಲೇ ಚಿಕಿತ್ಸೆ:ಮ್ಯಾನ್ಮಾರ್‌ನಲ್ಲಿ ಉಂಟಾದ ಭೀಕರ ಭೂಕಂಪ ಸಾಕಷ್ಟು ಸಾವು-ನೋವು ಉಂಟುಮಾಡಿದೆ. ಒಂದೆಡೆ ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈವರೆಗೆ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಇನ್ನೂ ನೂರಾರು ಮಂದಿ ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ. ಮತ್ತೊಂದೆಡೆ ಜೀವ ಉಳಿಸಬೇಕಾದ ಆಸ್ಪತ್ರೆಗಳೇ ಕಣ್ಣೀರಿನ ಕಥೆ ಹೇಳುತ್ತಿವೆ. ಸಾವಿರಾರು ಹಾಸಿಗೆ ಸೌಲಭ್ಯ ಹೊಂದಿರುವ ಆಸ್ಪತ್ರೆಗಳು ನಾಮಾವಶೇಷವಾಗಿದ್ದು, ನೊಂದ ಸಂತ್ರಸ್ತರಿಗೆ ರಸ್ತೆಯಲ್ಲೇ ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಬಂದೊದಗಿವೆ. ಇದರಿಂದ ಮ್ಯಾನ್ಮಾರ್‌ನ ನೈಪಿತಾವು ಸೇರಿ 6 ಪ್ರದೇಶ ಹಾಗೂ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
Myanmar Earthquake | ಸಾವಿನ ಸಂಖ್ಯೆ 694ಕ್ಕೆ ಏರಿಕೆ, 1,600ಕ್ಕೂ ಹೆಚ್ಚು ಮಂದಿಗೆ ಗಾಯ!
Source : Smacy News
2 days ago