ಟಿವಿ9 ನೆಟ್‌ವರ್ಕ್ ಆಯೋಜಿಸಿರುವ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT 2025) ಶೃಂಗಸಭೆಯು ಮಾರ್ಚ್ 28-29ರಂದು ನಡೆಯುವ 2 ದಿನಗಳ ಕಾರ್ಯಕ್ರಮವಾಗಿದೆ. ಇದು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ರಾಜಕೀಯ, ಆಡಳಿತ, ಅರ್ಥಶಾಸ್ತ್ರ, ಆರೋಗ್ಯ, ಸಂಸ್ಕೃತಿ ಮತ್ತು ಕ್ರೀಡೆಗಳ ಕುರಿತು ಚರ್ಚೆಗಳನ್ನು ಒಳಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಮೊದಲ ದಿನವಾದ ನಿನ್ನೆ ಈ ಶೃಂಗಸಭೆಯಲ್ಲಿ ಭಾಷಣ ಮಾಡಿದರು. ಇಂದು ಈ ಶೃಂಗಸಭೆಯಲ್ಲಿ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮಾತನಾಡಿದ್ದಾರೆ. ನವದೆಹಲಿ, ಮಾರ್ಚ್ 29: ಟಿವಿ9 ಆಯೋಜಿಸಿರುವ “ವಾಟ್ ಇಂಡಿಯಾ ಥಿಂಕ್ಸ್ ಟುಡೇ” ಶೃಂಗಸಭೆಯಲ್ಲಿ ಭಾಗವಹಿಸಿದ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ (Chirag Paswan) ಬಿಹಾರ ರಾಜಕೀಯಕ್ಕೆ ಸಂಬಂಧಿಸಿದ ಹಲವು ಪ್ರಶ್ನೆಗಳಿಗೆ ಸ್ಪಷ್ಟವಾಗಿ ಉತ್ತರಿಸಿದರು. ಸಿಎಂ ನಿತೀಶ್ ಕುಮಾರ್ (CM Nitish Kumar) ಅವರ ಆರೋಗ್ಯವನ್ನು ಪ್ರಶ್ನಿಸುತ್ತಿದ್ದ ವಿರೋಧ ಪಕ್ಷಗಳಿಗೆ ಅವರು ಸಲಹೆ ನೀಡಿದ್ದಾರೆ. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಕಾರ್ಯಕ್ಷಮತೆಯ ಬಗ್ಗೆಯೂ ಅವರು ಭವಿಷ್ಯ ನುಡಿದಿದ್ದಾರೆ.
ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ನಾಯಕತ್ವ, ತಮ್ಮ ಸ್ಪರ್ಧೆಯ ಬಗ್ಗೆ ಚಿರಾಗ್ ಪಾಸ್ವಾನ್ ಹೇಳಿದ್ದೇನು?
Source : Smacy News
2 days ago