Ajinkya Rahane post match presentation: ಮುಂಬೈ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 16.2 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್ ಮಾಡಿತು, ಇದು ಈ ಋತುವಿನಲ್ಲಿ ಅವರ ಅತ್ಯಂತ ಕಡಿಮೆ ಸ್ಕೋರ್ ಆಗಿದೆ. ಪಂದ್ಯದ ನಂತರ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯಾ ರಹಾನೆ ಕೆಲ ವಿಚಾರ ಹಂಚಿಕೊಂಡಿದ್ದಾರೆ. (ಬೆಂಗಳೂರು, ಏ 01): ಐಪಿಎಲ್ 2025ರ ಸೋಮವಾರದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಎಂಟು ವಿಕೆಟ್‌ಗಳ ಸೋಲಿಗೆ ಕೋಲ್ಕತ್ತಾ ನೈಟ್ ರೈಡರ್ಸ್ (MI vs KKR) ತಂಡದ ನಾಯಕ ಅಜಿಂಕ್ಯಾ ರಹಾನೆ ತಮ್ಮ ಬ್ಯಾಟ್ಸ್‌ಮನ್‌ಗಳನ್ನೇ ದೂಷಿಸಿದ್ದಾರೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 16.2 ಓವರ್‌ಗಳಲ್ಲಿ 116 ರನ್‌ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು. ಮುಂಬೈ ತಂಡ 12.5 ಓವರ್‌ಗಳಲ್ಲಿ ಎರಡು ವಿಕೆಟ್‌ಗಳನ್ನು ಕಳೆದುಕೊಂಡು ಗುರಿ ತಲುಪಿತು.
MI vs KKR, IPL 2025: ಪೋಸ್ಟ್ ಮ್ಯಾಚ್ನಲ್ಲಿ ತನ್ನದೇ ತಂಡದ ಆಟಗಾರರಿಗೆ ಗದರಿದ ಅಜಿಂಕ್ಯಾ ರಹಾನೆ: ಏನಂದ್ರು ನೋಡಿ
Source : Smacy News
1 day ago