ರಾಜಕಾರಣಿಗಳ ಹನಿಟ್ರ್ಯಾಪ್ ದೊಡ್ಡಮಟ್ಟದಲ್ಲಿ ಸುದ್ದಿಯಾಗಿರುವ ಸಂದರ್ಭದಲ್ಲೇ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ಖಾಸಗಿ ಪ್ರೀಸ್ಕೂಲ್ ಶಿಕ್ಷಕಿಯೊಬ್ಬಳು ಪ್ರಿ ಸ್ಕೂಲ್ಗೆ ಬರುತ್ತಿದ್ದ ಮಕ್ಕಳ ಪೋಷಕನನ್ನೇ ಹನಿಟ್ರ್ಯಾಪ್ ಮಾಡಿ ಲಕ್ಷಾಂತರ ರೂ. ವಂಚಿಸಿರುವುದು ಬೆಳಕಿಗೆ ಬಂದಿದೆ. ಪೋಷಕನಿಗೆ ಮುತ್ತು ಕೊಟ್ಟು 50 ಸಾವಿರ ರೂ. ಪೀಕಿಸಿದ್ದ ಆರೋಪಿ, ರಿಲೇಷನ್ಶಿಪ್ನಲ್ಲಿ ಇರುವುದಾಗಿ ಲಕ್ಷಾಂತರ ರೂ. ವಂಚಿಸಿ ಪೊಲೀಸ್ ಬಲೆಗೆ ಬಿದ್ದಿದ್ದಾಳೆ. ಬೆಂಗಳೂರು, ಏಪ್ರಿಲ್ 1: ಆ ಟೀಚರ್ ಅಂತಿಥ ಮಹಿಳೆಯಲ್ಲ. ಪ್ರಿ ಸ್ಕೂಲ್ಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ (Honey Trap) ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ, ಲಕ್ಷಾಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಮತ್ತಷ್ಟು ಹಣ ವಸೂಲಿ ಮಾಡಲು ಮುಂದಾದ ಟೀಚರ್ (Pre School Teacher) ಹಾಗೂ ಗ್ಯಾಂಗ್ ಈಗ ಪೊಲೀಸ್ ಬಲೆಗೆ ಬಿದ್ದಿದೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ಖಾಸಗಿ ಪ್ರೀಸ್ಕೂಲ್ (Pre School) ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಎಂಬಾಕೆಯೇ ಹನಿಟ್ರ್ಯಾಪ್ ಎಸಗಿದ ಶಿಕ್ಷಕಿ.
ಒಂದು ಕಿಸ್ಗೆ 50 ಸಾವಿರ ರೂ! ಲಕ್ಷಾಂತರ ರೂ. ಸುಲಿಗೆ: ಬೆಂಗಳೂರಿನಲ್ಲಿ ಖತರ್ನಾಕ್ ಟೀಚರ್, ಹನಿಟ್ರ್ಯಾಪ್ ಗ್ಯಾಂಗ್ ಬಂಧನ
Source : Smacy News
1 day ago