... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Sri.Balaji,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿ ವಿಶ್ವ ಪರಂಪರೆ ಪ್ರದೇಶದ ವ್ಯಾಪ್ತಿಯಲ್ಲಿರುವ ಆನೆಗುಂದಿ ಗ್ರಾಮದ ತುಂಗಭದ್ರಾ ನದಿಯ ಮಧ್ಯದಲ್ಲಿರುವ 64 ಕಂಬಗಳ ಮಂಟಪ (ಕೃಷ್ಣದೇವರಾಯನ ಸಮಾಧಿ) ಬಳಿ ಮಾಂಸ ಕತ್ತರಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಸ್ಪಂದಿಸಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಪರಿಶೀಲನೆ ನಡೆಸಿ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದರು. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ, ತಿಳಿವಳಿಕೆ ಇಲ್ಲದೆ ಕೆಲವು ಮಂದಿ ಈ ತಪ್ಪನ್ನು ಎಸಗಿರುವುದು ತಿಳಿದುಬಂದಿದೆ. ಐತಿಹಾಸಿಕ ತಾಣದ ಬಳಿ ಈ ರೀತಿ ಮಾಂಸ ಕಟ್‌ ಮಾಡುವುದು ಅಕ್ಷಮ್ಯ ಅಪರಾಧವಾಗಿದ್ದು, ಅಲ್ಲಿನ ಸ್ಥಳೀಯರಿಗೆ ತಿಳುವಳಿಕೆ ಹೇಳಿ ಎಚ್ಚರಿಕೆ ನೀಡಲಾಗಿದೆ. ಬಳಿಕ ಹಂಪಿ ಸ್ಮಾರಕಗಳ ಬಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರನ್ನು ಕಳುಹಿಸಿ ಸದರಿ ಸ್ಥಳವನ್ನು ಸ್ವಚ್ಛ ಮಾಡಿಸಲಾಗಿದೆ. ಮುಂದುವರೆದು, ಇಲಾಖೆಯ ದಿನಗೂಲಿ ನೌಕರರನ್ನು ತಾತ್ಕಾಲಿಕವಾಗಿ ಸದರಿ ಸ್ಮಾರಕದ ಸ್ವಚ್ಛತೆ ಮತ್ತು ಕಾವಲಿಗಾಗಿ ನಿಯೋಜಿಸಲಾಗಿರುತ್ತದೆ ಎಂದು ಕಮಲಾಪುರದ ಪುರಾತತ್ತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ osd_cmkarnataka ʼಎಕ್ಸ್‌ʼ ಖಾತೆಗೆ ಟ್ಯಾಗ್‌ ಮಾಡಿ.

Source : Smacy News

20 days ago

Home Flash News