South India's No.1 Digital Mobile Paper
LIVE
Welcome to Smacy Media

ಉಕ್ರೇನ್-ಪಶ್ಚಿಮ ಏಷ್ಯಾದಲ್ಲಿ ಶಾಂತಿ ಮರುಸ್ಥಾಪನೆಗೆ ಭಾರತ ಬದ್ಧ: ಪ್ರಧಾನಿ ಮೋದಿ

ಉಕ್ರೇನ್-ಪಶ್ಚಿಮ ಏಷ್ಯಾದಲ್ಲಿ ಶಾಂತಿ ಮರುಸ್ಥಾಪನೆಗೆ ಭಾರತ ಬದ್ಧ: ಪ್ರಧಾನಿ ಮೋದಿ

ನವದೆಹಲಿ: ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಕೈಗೊಳ್ಳುವ ಪ್ರತಿಯೊಂದು ಅರ್ಥಪೂರ್ಣ ಪ್ರಯತ್ನಕ್ಕೂ ಭಾರತದ ಸಂಪೂರ್ಣ ಬೆಂಬಲ ಮುಂದುವರಿಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಸ್ಪಷ್ಟಪಡಿಸಿದ್ದಾರೆ. ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್(Donald Tusk) ಅವರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆಯ ಬಳಿಕ ಅವರು ಈ ಮಾತುಗಳನ್ನಾಡಿದ್ದಾರೆ.

ಉಕ್ರೇನ್ ಸಂಘರ್ಷ ಕೊನೆಗೊಳಿಸಲು ಜಾಗತಿಕ ಮಟ್ಟದಲ್ಲಿ ಪ್ರಯತ್ನಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪೋಲೆಂಡ್ ಪ್ರಧಾನಿ ಟಸ್ಕ್ ಮೂರು ದಿನಗಳ ಭಾರತ ಭೇಟಿಗಾಗಿ ಆಗಮಿಸಿದ್ದಾರೆ. ಮಾತುಕತೆಗಳ ಬಳಿಕ ಜಂಟಿ ಮಾಧ್ಯಮ ಹೇಳಿಕೆ ನೀಡಿದ ಪ್ರಧಾನಿ ಮೋದಿ, ಭಾರತ ಹಾಗೂ ಪೋಲೆಂಡ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ವಿಸ್ತರಿಸಲು ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದರು.

ರಕ್ಷಣೆ, ಬಾಹ್ಯಾಕಾಶ ಮತ್ತು ಪರಮಾಣು ಇಂಧನ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ನಾವು ಒಮ್ಮತಕ್ಕೆ ಬಂದಿದ್ದೇವೆ. ಈ ಎಲ್ಲಾ ಕಾರ್ಯತಂತ್ರದ ಕ್ಷೇತ್ರಗಳಲ್ಲಿ ಭಾರತದೊಂದಿಗೆ ಜಂಟಿ ಅಭಿವೃದ್ಧಿ ಮತ್ತು ಉತ್ಪಾದನೆಯಲ್ಲಿ ಪಾಲ್ಗೊಳ್ಳಲು ಪೋಲೆಂಡ್‌ ಕಂಪನಿಗಳನ್ನು ಆಹ್ವಾನಿಸುತ್ತೇವೆ" ಎಂದು ಮೋದಿ ತಿಳಿಸಿದರು.

ಉಭಯ ದೇಶಗಳ ನಡುವಿನ ಆರ್ಥಿಕ ಬಲವು ಪಾಲುದಾರಿಕೆಗೆ ಹೊಸ ಅವಕಾಶಗಳನ್ನು ಸೃಷ್ಟಿಸಿದೆ ಎಂದ ಪ್ರಧಾನಿ, ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದವು (FTA) ಎರಡು ದೇಶಗಳ ಆರ್ಥಿಕ ಸಂಬಂಧವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

"ಭಾರತ ಮತ್ತು ಪೋಲೆಂಡ್ ಎರಡೂ ದೇಶಗಳು ಪ್ರಜಾಸಭ್ಯ ಮೌಲ್ಯಗಳು ಹಾಗೂ ಕಾನೂನಿನ ಆಡಳಿತದಲ್ಲಿ ಅಚಲ ನಂಬಿಕೆ ಹೊಂದಿವೆ. ಜಾಗತಿಕ ಆಡಳಿತ ಸಂಸ್ಥೆಗಳನ್ನು ಮತ್ತಷ್ಟು ಪರಿಣಾಮಕಾರಿ ಹಾಗೂ ಸಬಲೀಕರಣಗೊಳಿಸಲು ಸುಧಾರಣೆಗಳು ಅತ್ಯಗತ್ಯ ಎಂದು ನಾವು ನಂಬುತ್ತೇವೆ" ಎಂದ ಅವರು, "ಉಕ್ರೇನ್ ಆಗಿರಲಿ ಅಥವಾ ಪಶ್ಚಿಮ ಏಷ್ಯಾವಾಗಿರಲಿ, ಶಾಂತಿಗಾಗಿ ನಡೆಯುವ ಪ್ರತಿಯೊಂದು ಅರ್ಥಪೂರ್ಣ ಪ್ರಯತ್ನಕ್ಕೂ ಭಾರತ ಬೆಂಬಲ ನೀಡುವುದನ್ನು ಮುಂದುವರಿಸಲಿದೆ" ಎಂದು ಪುನರುಚ್ಚರಿಸಿದರು.

📍 Chennai
📰 Udayavani
🕒 7 days ago

Related News

ಸಂಸತ್ ವಿಸರ್ಜಿಸಿ ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ನಡೆಸಲು ಬಿಜೆಪಿಗೆ ಧೈರ್ಯವಿದೆಯೇ? ಖರ್ಗೆ
ಸಂಸತ್ ವಿಸರ್ಜಿಸಿ ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ನಡೆಸಲು ಬಿಜೆಪಿಗೆ ಧೈರ್ಯವಿದೆಯೇ? ಖರ್ಗೆ
Today's Motivation
Today's Motivation
Daily Calender
Daily Calender
⬅ Back
➕ Post Ad
To Ads ➡