ಇಸ್ರೇಲ್‌ಗೆ ಎದುರಾದ ಬೆದರಿಕೆ ನಿರ್ಮೂಲನೆ ಮಾಡಲು ಟ್ರಂಪ್ ಜೊತೆ ಕೆಲಸ: ನೆತನ್ಯಾಹು
ಜೆರುಸಲೇಂ: ಇಸ್ರೇಲ್ ಅಸ್ತಿತ್ವಕ್ಕೆ ಎದುರಾಗಿರುವ ಬೆದರಿಕೆಯನ್ನು ನಿರ್ಮೂಲನೆ ಮಾಡಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.
ಇಸ್ರೇಲ್‌ನಲ್ಲಿ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಇರಾನ್‌ನಿಂದ ನಮ್ಮ ಅಸ್ವಿತ್ವಕ್ಕೆ ಎದುರಾಗಿರುವ ಬೆದರಿಕೆಯನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ಇಸ್ರೇಲ್‌ಗೆ ಅಪೂರ್ವ ಅವಕಾಶ ಲಭಿಸಿದೆ' ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿರುವ ನೆತನ್ಯಾಹು, 'ನಾವು ಬಲಿಷ್ಠ ಬಲಪಂಥೀಯ ಸರ್ಕಾರವನ್ನು ರಚಿಸಬೇಕು' ಎಂದು ಪ್ರತಿಪಾದಿಸಿದ್ದಾರೆ.
ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಪ್ರತಿಸ್ಪರ್ಧಿ, ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ ಎಂದು ಸಮೀಕ್ಷೆಗಳು ಹೇಳಿವೆ. ಆದರೆ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯುವ ಸಾಧ್ಯತೆ ಕಡಿಮೆಯಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿವೆ.
ಇಸ್ರೇಲ್‌ನಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆ ಪ್ರಮಾಣದ ಮತದಾನವಾಗಿದೆ. ರಾತ್ರಿ 8 ಗಂಟೆಯ ವೇಳೆಗೆ ಶೇ 74.3ರಷ್ಟು ಮತದಾನವಾಗಿದೆ.