South India's No.1 Digital Mobile Paper
LIVE
Welcome to Smacy Media

ದೀಪಾವಳಿ ಸಂದರ್ಭದಲ್ಲೇ ಹೆಚ್ಚಳವಾಗಲಿದೆ ಹಾಲಿನ ದರ: ಜನತೆಗೆ ಶಾಕ್‌ ಕೊಟ್ಟ ಸರ್ಕಾರ

ದೀಪಾವಳಿ ಸಂದರ್ಭದಲ್ಲೇ ಹೆಚ್ಚಳವಾಗಲಿದೆ ಹಾಲಿನ ದರ: ಜನತೆಗೆ ಶಾಕ್‌ ಕೊಟ್ಟ ಸರ್ಕಾರ

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮಕ್ಕೆ ಸಿದ್ದವಾಗುತ್ತಿರುವ ರಾಜ್ಯದ ಜನತೆಗೆ ಸರ್ಕಾರ ಬಿಗ್‌ ಶಾಕ್‌ ನೀಡಿದೆ. ಹಾಲಿನ ದರ ಹೆಚ್ಚಳ ವಿಚಾರದಲ್ಲಿ ಸಂಪುಟ ತೆಗೆದುಕೊಂಡಿರುವ ನಿರ್ಧಾರ ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆಯಾದಂತಾಗಿದೆ.

ಗುರುವಾರ (ಅ.29) ರಂದು ಡಿ.ಕೆ.ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಹಾಲಿನ ದರ ಹೆಚ್ಚಳದ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಹಾಲಿನ ದರ 8 ರೂ. ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಆ ಮೂಲಕ ಗ್ರಾಹಕರಿಗೆ ಸರ್ಕಾರ ಹಬ್ಬದ ಸಂದರ್ಭದಲ್ಲೇ ಶಾಕ್‌ ನೀಡಿದೆ.

8 ರೂಪಾಯಿ ಪೈಕಿ ರೈತರಿಗೆ 7 ರೂಪಾಯಿ ಮತ್ತು ಉಳಿದ 1 ರೂಪಾಯಿ ಒಕ್ಕೂಟಗಳಿಗೆ ಸಿಗಲಿದೆ. ಪರಿಸ್ಕೃತ ದರ ಇದೇ ನವೆಂಬರ್‌ 1ರಿಂದ ಜಾರಿಗೆ ಬರಲಿದೆ.

ಈ ಮೊದಲು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ತಾತ್ವಿಕ ಅನುಮೋದನೆ ನೀಡಲಾಗಿತ್ತು. ಆದರೆ ವಿಧಾನ ಪರಿಷತ್‌ ಚುನಾವಣೆಯ ನೀತಿ ಸಂಹಿತೆ ಕಾರಣಕ್ಕೆ ಎರಡು ದರ ಏರಿಕೆಯನ್ನು ತಡೆ ಹಿಡಿಯಲಾಗಿತ್ತು.

📍 Kopal
📰 Udayavani
🕒 10 hrs ago

Related News

Today's Motivation
Today's Motivation
Daily Calender
Daily Calender
WPL Auction: ಮಹಿಳಾ ಪ್ರೀಮಿಯರ್ ಲೀಗ್; ಆರ್‌ಸಿಬಿಗೆ ನಾಲ್ವರು ಬಲಾಢ್ಯರ ಎಂಟ್ರಿ
WPL Auction: ಮಹಿಳಾ ಪ್ರೀಮಿಯರ್ ಲೀಗ್; ಆರ್‌ಸಿಬಿಗೆ ನಾಲ್ವರು ಬಲಾಢ್ಯರ ಎಂಟ್ರಿ
⬅ Back
➕ Post Ad
To Ads ➡